ಧಾರವಾಡ): ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.
ರಾಯಣ್ಣ ಪ್ರತಿಮೆಯ ಬಲಗೈ ವಿರೂಪಗೊಳಿಸಲಾಗಿದೆ. ಗ್ರಾಮಸ್ಥರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
‘ಕೃತ್ಯಕ್ಕೆ ಸಂಬಂಧಿಸಿದಂತೆ ಅಶೋಕ ಕಾಲವಾಡ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೋಲೀಸರು ತಿಳಿಸಿದ್ದಾರೆ.

ಬಟ್ಟೆ ಸುತ್ತಿ ಪ್ರತಿಮೆಯನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Laxmi News 24×7