ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಾಹಿತಿ ಬಂದ ತತ್‌ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಇದರ ಹಿಂದೆ ಇನ್ನು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾವ ಧರ್ಮಕ್ಕೆ ಸೇರಿದವರು ಎಂಬುದು ಇಲ್ಲಿ ಮುಖ್ಯವಲ್ಲ ಎಂದು ತಿಳಿಸಿದ್ದಾರೆ.
Laxmi News 24×7