Breaking News

ಕೆಎಸ್‌ಸಿಎ: ಧಾರವಾಡ ವಲಯದ ಸಭೆ ನಡೆಸಲು ವೀರಣ್ಣ ಸವಡಿ ಆಗ್ರಹ

Spread the love

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಧಾರವಾಡ ವಲಯದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರ ಸಭೆ ಕರೆಯಬೇಕು’ ಎಂದು ವಲಯದ ಚೇರ್ಮನ್ ವೀರಣ್ಣ ಸವಡಿ ಕೋರಿದ್ಧಾರೆ.

ಈ ಕುರಿತು ಕೆಎಸ್‌ಸಿಎ ಕಾರ್ಯದರ್ಶಿ ಅವರಿಗೆ ಇ-ಮೇಲ್ ಮಾಡಿರುವ ಅವರು, ‘ಆಟಗಾರರ ಪೋಷಕರು, ಕೋಚ್‌ಗಳು, ವಿವಿಧ ಕ್ಲಬ್‌ಗಳ ಸದಸ್ಯರು ನನ್ನನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ.

ಎಲ್ಲ ಬೆಳವಣಿಗೆಗಳನ್ನು ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ’ ಎಂದರು.

’19 ವರ್ಷದೊಳಗಿನವರ ತಂಡದ ಆಯ್ಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಆಟಗಾರರ ಪಾಲಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರಿಂದ ಧಾರವಾಡ ವಲಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬೇಗ ಬಗೆಹರಿಸುವಂತೆಯೂ ಮನವಿ ಮಾಡಲಾಗಿದೆ’ ಎಂದರು.

‘ಪ್ರತಿ ತಿಂಗಳು ವಲಯದ ಸಭೆ ನಡೆಸಬೇಕು. ವಲಯ ಸಂಯೋಜಕರು ಬಾರದಿರುವುದಕ್ಕೆ ಎರಡ್ಮೂರು ತಿಂಗಳಿಂದ ನಿಮಂತ್ರಕರು ಸಭೆ ನಡೆಸಿಲ್ಲ. ಸಂಯೋಜಕರನ್ನು ಕಳಿಸಿ ಕೂಡಲೇ ಸಭೆ ನಡೆಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ’ ಎಂದು ಹೇಳಿದರು.

‘ವಿವಿಧ ವಯೋಮಾನದವರ ತಂಡಕ್ಕೆ ಆಟಗಾರರ ಆಯ್ಕೆ ಪಾರದರ್ಶಕವಾಗಿ ನಡೆಯುತ್ತಿಲ್ಲ, ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂಬ ಬಗ್ಗೆಯೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆ ನಡೆದರೆ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬಹುದು. ಶೀಘ್ರ ಸಭೆ ನಡೆಸಲಾಗುವುದು ಎಂದು ಕಾರ್ಯದರ್ಶಿಯವರೂ ತಿಳಿಸಿದ್ದಾರೆ’ ಎಂದರು.


Spread the love

About Laxminews 24x7

Check Also

ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Spread the love ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ