Breaking News

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ

Spread the love

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ

ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದು ಹೇಳಿದ್ದರು .

ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.

ಪೇನ್ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು .

ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (

Spread the loveಬೆಂಗಳೂರು, ಜುಲೈ 1: ‘ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (BR Patil) ಆಡಿದ್ದ ಅಬ್ಬರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ