Breaking News

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ

Spread the love

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan) ಅವರ ತಂದೆ ಸಲೀಂ ಖಾನ್ (Salim Khan) ಅವರಿಗೆ ಬುರ್ಖಾಧಾರಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನಿಂದ ಜೀವ ಬೆದರಿಕೆ ಬಂದಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಇತ್ತೀಚೆಗಷ್ಟೇ ಸಲ್ಮಾನ್‌ ಖಾನ್‌ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು.

ಈ ಘಟನೆ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್ ಬಿಷ್ಣೋಯ್‍ಗೆ (Lawrence Bishnoi) ಅವರ ಸೂಚನೆಯ ಮೇರೆಗೆ ನಡೆದಿತ್ತು.

ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಬೆಳಗ್ಗೆ ವಾಕಿಂಗ್ ಮಾಡುವ ವೇಳೆ ಅವರಿಗೆ ಬೆದರಿಕೆ ಬಂದಿದೆ. ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ಹಾಗೂ ಬುರ್ಖಾಧಾರಿ ಮಹಿಳೆ ವಾಕಿಂಗ್‌ ಮಾಡಿ ಬೆಂಚ್‌ ನಲ್ಲಿ ಕೂತಿದ್ದ ಸಲೀಂ ಖಾನ್‌ ಅವರ ಬಳಿ ಬಂದು “ಲಾರೆನ್ಸ್ ಬಿಷ್ಣೋಯ್ ಅವರನ್ನು ಕರೆಯಬೇಕಾ” ಎಂದು ಬೆದರಿಕೆ ಹಾಕಿ ಪರಾರಿ ಆಗಿದ್ದಾರೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ