Breaking News

ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ FIRʼ

Spread the love

ಬೆಂಗಳೂರು,ಸೆಪ್ಟೆಂಬರ್‌ 19: ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‍ಐಆರ್‍ಗಳು ದಾಖಲಾಗುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ; ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯರ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ. ಶಾಸಕರಾದ ಹರೀಶ್ ಪೂಂಜಾ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಭರತ್ ಶೆಟ್ಟಿ- ಹೀಗೆ ನಿರಂತರವಾಗಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಹತ್ತಿಕ್ಕುವ, ಅವರ ಧ್ವನಿ ಅಡಗಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದು ಐವನ್ ಡಿಸೋಜ ಅವರು ಹೇಳಿಕೆ ಕೊಟ್ಟಿದ್ದರು. ನಮ್ಮ ಮಂಗಳೂರಿನ ಜನರು, ಕಾರ್ಯಕರ್ತರು ದಿನವೂ ಪೊಲೀಸ್ ಸ್ಟೇಶನ್‍ಗೆ ಹೋಗುತ್ತಿದ್ದಾರೆ. ದೂರನ್ನೂ ನೀಡುತ್ತಿದ್ದಾರೆ. ಆದರೆ, ಇವತ್ತಿನ ತನಕ ದೂರನ್ನು ತೆಗೆದುಕೊಂಡಿಲ್ಲ ಎಂದು ವಿವರಿಸಿದರು. ಅವರ ಮೇಲೆ ಎಫ್‍ಐಆರ್ ದಾಖಲಿಸುತ್ತಿಲ್ಲವೇಕೆ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ

Spread the love ಹುಬ್ಬಳ್ಳಿ/ವಿಜಯನಗರ: ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ