Breaking News

ಒಂದು ದೇಶ, ಒಂದು ಚುನಾವಣೆ ಸಮರ್ಥ ನಿರ್ಧಾರ: ಈರಣ್ಣ ಕಡಾಡಿ

Spread the love

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರವು ‘ಒಂದು ದೇಶ, ಒಂದು ಚುನಾವಣೆ’ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸಿದ್ದಾರೆ.

 

ಗುರುವಾರ ಪ್ರಕಟಣೆ ನೀಡಿರುವ ಅವರು, ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿದೆ ಹಾಗೂ ಇದಕ್ಕೆ ಒಂದೇ ಮತದಾರರ ಪಟ್ಟಿ ಬಳಕೆಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು, ಚುನಾವಣಾ ಅಭ್ಯರ್ಥಿಗಳು ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಬೇಕಾಗುತ್ತಿತ್ತು. ದೇಶದ ಹಣ ಉಳಿಸಿ ಅದನ್ನು ಅಭಿವೃದ್ಧಿಗೆ ಬಳಸಬೇಕು. ಬಹಳ ವೆಚ್ಚದಾಯಕ ಚುನಾವಣೆಯನ್ನು ಕಡಿಮೆ ವೆಚ್ಚದಾಯಕ ಚುನಾವಣೆಯನ್ನಾಗಿ ಮಾಡಬೇಕು ಎಂಬ ದೂರದೃಷ್ಟಿಯ ನಿರ್ಧಾರವಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ