Breaking News

ಯಡಿಯೂರಪ್ಪ ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ: ಪರಮಶಿವಯ್ಯ

Spread the love

ಬೆಂಗಳೂರು, ನ.27- ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ. ಹಾಗಾಗಿ ಅವರು ಓಲೈಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀರ್ಘ ಅವಯವರೆಗೂ ಯಡಿಯೂರಪ್ಪ ರಾಜಕೀಯದಲ್ಲಿದ್ದಾರೆ. ಅಧಿಕಾರದ ಕೊನೆಯ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು ಎಂಬ ಆಸೆ ಅವರದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಇದನ್ನು ಓಲೈಕೆ ರಾಜಕಾರಣ ಎಂದು ಹೇಳುತ್ತಿರುವುದು ಸರಿಯಲ್ಲ ಎಂದರು.

ಸಮುದಾಯಕ್ಕೆ ಅಭಿವೃದ್ಧಿ ನಿಗಮದ ಅವಶ್ಯಕತೆ ಇದೆ. ನಮ್ಮಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ದೊರಕಿಸಿಕೊಡಬೇಕಿದೆ. ನಿಗಮವನ್ನು ವಿರೋಧ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಯಾರು? ಅವರಿಂದ ಲಿಂಗಾಯಿತ ಸಮುದಾಯಕ್ಕೆ ಏನು ಒಳ್ಳೆಯದಾಗಿದೆ ? ಈ ಹಿಂದೆ ವೀರಶೈವರು, ಲಿಂಗಾಯಿತರು ಎಂದು ಧರ್ಮದ ಹೋರಾಟದ ಹೆಸರಿನಲ್ಲಿ ಸಮಾಜ ಹೊಡೆಯುವ ಪ್ರಯತ್ನ ಮಾಡಿದ್ದರು.

ಎಂ.ಬಿ.ಪಾಟೀಲ್, ಶ್ರೀ ಜಯಮೃತ್ಯಂಜಯ ಸ್ವಾಮೀಜಿಗಳು ಎಲ್ಲರೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸಿದ್ದರು. ಅದು ಸಫಲ ಆಗಲಿಲ್ಲ. ಮುಂದೆಯೂ ಸಫಲವಾಗುವುದಿಲ್ಲ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ