Breaking News

ಬಯೋಲಾಜಿಕಲ್ ವಾರ್ ರೀತಿ ಇದೆ; ಮುನಿರತ್ನ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ

Spread the love

ತ್ಯಾಚಾರ ಆರೋಪ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ಅತ್ಯಾಚಾರ ಆರೋಪ ಪ್ರಕರಣ ಮುನ್ನಲೆಗೆ ಬಂದಿದೆ. ಅತ್ಯಾಚಾರ ಆರೋಪ ಪ್ರಕರಣ ಮಾತ್ರವಲ್ಲದೆ ಹೆಚ್‌ಐವಿ ಇರುವ ರೋಗಿಗಳ ರಕ್ತವನ್ನು ತನ್ನದೇ ಪಕ್ಷದ ನಾಯಕರಿಗೆ ಇಂಜೆಕ್ಟ್‌ ಮಾಡಲು ಮುನಿರತ್ನ ಸಂಚು ಮಾಡಿದ್ದರು ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಬಿಜೆಪಿ ನಾಯಕರೇ ಇದನ್ನು ಕೇಳಿ ಬೆಚ್ಚಿಬಿದ್ದಿದ್ದಾರೆ.

ಮಾಜಿ ಸಂಸದ ಡಿ.ಕೆ. ಸುರೇಶ್ ಈಗ ಮುನಿರತ್ನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ್ದಾರೆ.Munirathna: ಬಯೋಲಾಜಿಕಲ್ ವಾರ್ ರೀತಿ ಇದೆ; ಮುನಿರತ್ನ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ

ಖಾಸಗಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಇವರ ರಾಜಕೀಯ ದ್ವೇಷಕ್ಕೆ ಬಳಸಿಕೊಂಡಿದ್ದಾರೆ, ಇದು ಅಸಹ್ಯದ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ಪ್ರಕರಣದ ತನಿಖೆ ನಡೆಸಲು ವಿಶೇಷ ತಂಡವನ್ನು ರಚನೆ ಮಾಡಬೇಕು, ಯಾರನ್ನು ಯಾವ ಯಾವ ಸಮಯದಲ್ಲಿ ಬಳಸಿಕೊಂಡಿದ್ದಾರೆ ಎನ್ನುವುದು ಜಗತ್ತಿಗೆ ತಿಳಿಯಬೇಕು, ಎಸ್‌ಐಟಿ ಅಥವಾ ಬೇರೆ ಸಂಸ್ಥೆಯಿಂದ ತನಿಖೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸಮರ್ಪಕ ತನಿಖೆಯಿಂದ ಮಾತ್ರವೇ ಬಿಜೆಪಿ ನಾಯಕರ ಬಣ್ಣ ಬಯಲಾಗಬೇಕಿದೆ. ಇಂತಹ ಗಂಭೀರ ಆರೋಪಗಳು ಕೇಳಿಬಂದಿದ್ದರೂ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ. ರವಿ ಮತ್ತು ಹೆಚ್‌.ಡಿ. ಕುಮಾರಸ್ವಾಮಿ ಮುನಿರತ್ನ ಪರ ಬೆಂಬಲಕ್ಕೆ ನಿಂತಿರುವುದು ನಾಚಿಕೆಗೇಡು ಎಂದು ಹೇಳಿದರು.


Spread the love

About Laxminews 24x7

Check Also

ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Spread the love ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ