ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ.
ಕೊಲೆ ಆರೋಪಿ ಲಕ್ಷ್ಮಣ್ ಕಾಲಿಗೆ ಅಫಜಲಪುರ ಠಾಣೆ ಪಿಎಸ್‌ಐ ಸೋಮಲಿಂಗ ಒಡೆಯರ್ ಗುಂಡೇಟು ಹೊಡೆದಿದ್ದು, ಆತನ ಬಳಿ ಇದ್ದ ಗನ್ ವಶಕ್ಕೆ ಪಡೆಯಲಾಗಿದೆ.
ಆರೋಪಿ ಲಕ್ಷ್ಮಣ್ ನನ್ನು ಕರೆದುಕೊಂಡು ಪೊಲೀಸರು ಮಡ್ಯಾಳ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣ ಪಿಎಸ್‌ಐ ಸೋಮಲಿಂಗ ಆತ್ಮರಕ್ಷಣೆಗಾಗಿ ಆರೋಪಿ ಬಲಗಾಲಿಗೆ ಗುಂಡೇಟು ಹೊಡೆದಿದ್ದಾರೆ.
ಆರೋಪಿ ಲಕ್ಷ್ಮಣ್ ಬೆಂಗಳೂರು ಹಾಗೂ ಕಲಬುರಗಿ ಸೇರಿದಂತೆ ವಿವಿಧೆಡೆ ಬಂದೂಕು ಸರಬರಾಜು ಮಾಡುತ್ತಿದ್ದ. ಅಕ್ರಮ ಶಸ್ತ್ರಾಸ್ತ್ರ ಪೂರೈಕೆ, ಕೊಲೆಸೇರಿದಂತೆ ಆರೋಪಿ ವಿರುದ್ಧ 11 ಕೇಸ್ ಗಳಿವೆ. ಆಳಂದ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Laxmi News 24×7