ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಧಾನ ತಾಲೂಕ್ ಅವರು ಮಂಡ್ಯಾಕೆ ಭೇಟಿ ನೀಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇವೆಲ್ಲಾ ಗಲಭೆ ನಡೆಯುತ್ತಿವೆ.
ಇಂತವರನ್ನು ಶೂಟ್ ಮಾಡಬೇಕು ಎಂದು ಕಿಡಿ ಕಾಡಿದರು.
ಮದ್ದೂರಿನ ನಿಡಘಟ್ಟದ ಬಳಿ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ್ದಾರೆ. ನಾನು ಹೋದ ಮೇಲೆ ಏನಾದರೂ ಆದರೆ ನನ್ನ ಮೇಲೆ ಕೇಸ್ ಹಾಕಿ. ನಮ್ಮನ್ನು ತಡೆಯುವ ಕೆಲಸ ಅಕ್ಷಮ್ಯ ಅಪರಾಧ. ನಮ್ಮ ಸಂಘಟನೆ ಹಾಗೂ ನಮ್ಮ ವೈಚಾರಿಕತೆಯನ್ನು ತಡೆಯುತ್ತಿದ್ದಾರೆ ಎಂದು ಕಿಡಿ ಕಾರಿದರು.