Breaking News

ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ

Spread the love

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕರಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ತಡ ಮಾಡುತ್ತಿರುವ ಸಲುವಾಗಿ ಹಲವು ವಲಸಿಗ ಸಚಿವರು, ಶಾಸಕರು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಸಚಿವ ರಮೇಶ್ ಜಾರಕಿ ಹೊಳಿಯವರನ್ನು ಹೊರತುಪಡಿಸಿ ಬೆಂಗಳೂರಿನಲ್ಲಿ ಇಂದು ರಾತ್ರಿ ಸಭೆ

ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವನ್ನು ಉರುಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ ಸೇರುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸದೆ.

ಈ ಹಿಂದೆ ಬಿಎಸ್ ಯಡಿಯೂರಪ್ಪರವರು ಕಾಂಗ್ರೆಸ್‍ ಹಾಗೂ ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ ಶಾಸಕರನ್ನು ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದರು. ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲಾ ಶಾಸಕರನ್ನು ಮನ ಒಲಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಕೊಡಿಸುವ ಮೂಲಕ ಬಿಜೆಪಿ ಸರಕಾರ ರಚನೆಗೆ ಕಾರಣರಾಗಿದ್ದರು.
ಆದರೆ, ಹಲವರಿಗೆ ಸಚಿವ ಸ್ಥಾನ ನೀಡದಿರುವುದು ವಲಸೆ ಶಾಸಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ