Breaking News

ಒಂದೇ ದಿನ 2 ಪರೀಕ್ಷೆ : RCU ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಲ್ಲಿ ಗೊಂದಲ

Spread the love

ಬೆಳಗಾವಿ: ಒಂದೇ ದಿನ ಎರಡು ಪರೀಕ್ಷೆ ನಿಗದಿಯಾದ ಕಾರಣ, ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್‌ಸಿಯು) ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಆರ್‌ಸಿಯು ವ್ಯಾಪ್ತಿಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 421 ಪದವಿ ಕಾಲೇಜುಗಳಿವೆ.ಒಂದೇ ದಿನ 2 ಪರೀಕ್ಷೆ : RCU ಬಿ.ಎ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಲ್ಲಿ ಗೊಂದಲ

ಬಿ.ಎ 4ನೇ ಸೆಮಿಸ್ಟರ್‌ನಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಇದ್ದಾರೆ. ಅವರಿಗೆ ಸೆ.29, 30ರಂದು ಐಚ್ಛಿಕ ಕನ್ನಡ ವಿಷಯದ ಪರೀಕ್ಷೆ ನಿಗದಿಪಡಿಸಲಾಗಿದೆ.

ಆದರೆ, ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿರುವ ಕಡ್ಡಾಯ ಕನ್ನಡ ವಿಷಯದ ಸ್ಪರ್ಧಾತ್ಮಕ ಪರೀಕ್ಷೆಯೂ ಸೆ.29ರಂದೇ ಇದೆ. ಆರ್‌ಸಿಯುನ ಹಲವು ವಿದ್ಯಾರ್ಥಿಗಳು ಆ ಪರೀಕ್ಷೆಗೂ ನೋಂದಣಿ ಮಾಡಿಕೊಂಡಿದ್ದಾರೆ.

ಅವಕಾಶ ಕೈತಪ್ಪುತ್ತದೆ: ‘ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಯ ಪರೀಕ್ಷೆಗೆ ₹750 ಶುಲ್ಕ ಭರಿಸಿದ್ದೇನೆ. ಎರಡೂ ಪರೀಕ್ಷೆ ಒಂದೇ ದಿನ ನಿಗದಿಯಾದ ಹಿನ್ನೆಲೆಯಲ್ಲಿ ಇಕ್ಕಟ್ಟಿಗೆ ಸಿಲುಕಿದ್ದೇನೆ. ಹಿಂದಿನ ವೇಳಾಪಟ್ಟಿ ಪ್ರಕಾರ, ಸೆ.20, 21ರಂದು ಐಚ್ಛಿಕ ಕನ್ನಡ ವಿಷಯದ ಪರೀಕ್ಷೆ ನಡೆಯಬೇಕಿತ್ತು. ಪರಿಷ್ಕೃತ ವೇಳಾಪಟ್ಟಿಯಂತೆ ಸೆ.29, 30ಕ್ಕೆ ಅದನ್ನು ಮುಂದೂಡಿದ್ದರಿಂದ ಸಮಸ್ಯೆಯಾಗಿದೆ. ಒಂದು ಅವಕಾಶ ಕೈತಪ್ಪುತ್ತದೆ’ ಎಂದು ವಿದ್ಯಾರ್ಥಿಯೊಬ್ಬರು ಅಳಲು ತೋಡಿಕೊಂಡರು.

‘ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರ ವರೆಗೆ ಇದೆ. ಐಚ್ಛಿಕ ಕನ್ನಡ ವಿಷಯದ ಪರೀಕ್ಷೆ ಮಧ್ಯಾಹ್ನ 2ಕ್ಕೆ ಆರಂಭವಾಗುತ್ತದೆ. ಒಂದು ಪರೀಕ್ಷೆ ಮುಗಿದ ಸಮಯದಿಂದ ಮತ್ತೊಂದು ಪರೀಕ್ಷೆಗೆ ಒಂದೂವರೆ ತಾಸು ಸಮಯವಿದೆ. ಆದರೆ, ಸ್ಪರ್ಧಾತ್ಮಕ ಪರೀಕ್ಷೆ ಯಾವ ಕೇಂದ್ರದಲ್ಲಿ ನಡೆಯುತ್ತದೆ ಎಂದು ಇನ್ನೂ ಗೊತ್ತಾಗಿಲ್ಲ. ಬೆಳಗಾವಿಯಲ್ಲಿ ಮಾತ್ರ ಕೇಂದ್ರ ತೆರೆದರೆ, ಇಲ್ಲಿ ಪರೀಕ್ಷೆ ಬರೆದು ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿನ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತದೆ’ ಎಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ