Breaking News

30 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ: ಫ್ರಿಡ್ಜ್‌ನಲ್ಲಿ ಮೃತದೇಹ ಬಚ್ಚಿಟ್ಟ ಆರೋಪಿ!

Spread the love

ಬೆಂಗಳೂರು: ನಗರದ ಮಲ್ಲೇಶ್ವರದ ಪೈಪ್‌ಲೈನ್‌ನ ಕೆ.ವಿ.ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ, ಅವರ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ತಡವಾಗಿ ಪತ್ತೆಯಾಗಿದೆ.

ಮಹಾಲಕ್ಷ್ಮಿ(29) ಕೊಲೆಯಾದವರು.

ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು, ಪರಾರಿಯಾಗಿರುವ ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ.

ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದೆಹಲಿಯಲ್ಲಿ ನಡೆದಿದ್ದ ಶ್ರದ್ದಾ ವಾಕರ್‌ ಕೊಲೆ ಪ್ರಕರಣದ ಮಾದರಿಯಲ್ಲೇ ಈ ಕೊಲೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕೊಲೆಯಿಂದ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡಿದ್ದಾರೆ.

‘ಕೃತ್ಯ ನಡೆದ ಅಕ್ಕಪಕ್ಕದ ರಸ್ತೆಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಲಾಗಿದೆ. ಕೊಲೆಯಾದ ಮಹಿಳೆಯ ಮೊಬೈಲ್‌ ಫೋನ್ ಜಪ್ತಿ ಮಾಡಲಾಗಿದೆ. ಆಕೆ ಯಾರಿಗೆಲ್ಲ ಕರೆ ಮಾಡಿದ್ದರು ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ಸುಳಿವು ಸಿಕ್ಕಿದ್ದು ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು.

ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.3ರಂದೇ ಮೊಬೈಲ್‌ ಸ್ವಿಚ್ಡ್‌ ಆಫ್‌: ಮಹಾಲಕ್ಷ್ಮಿ ಅವರ ಮೊಬೈಲ್‌ ಸೆ.3ರಂದೇ ಸ್ವಿಚ್ಡ್‌ ಆಫ್‌ ಆಗಿತ್ತು. ಅಂದೇ ಕೊಲೆ ಮಾಡಿ ಆರೋಪಿ ಪರಾರಿ ಆಗಿರುವ ಶಂಕೆ ವ್ಯಕ್ತವಾಗಿದೆ.

ಮಹಾಲಕ್ಷ್ಮಿ ಅವರ ಪೋಷಕರು ನೇಪಾಳದವರು. 30 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವಾಸಿಸುತ್ತಿದ್ದರು. ಮಹಾಲಕ್ಷ್ಮಿ ಅವರು ಪಶ್ಚಿಮ ಬಂಗಾಳದ ಹೇಮಂತ್‌ದಾಸ್‌ ಅವರನ್ನು ಐದು ವರ್ಷದ ಹಿಂದೆ ಮದುವೆ ಆಗಿದ್ದರು. ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ದಂಪತಿ ಮಧ್ಯೆ ಇತ್ತೀಚೆಗೆ ವೈಮನಸ್ಸು ಉಂಟಾಗಿತ್ತು. ಮಹಾಲಕ್ಷ್ಮಿ ಅವರು ಪತಿಯಿಂದ ಪ್ರತ್ಯೇಕವಾಗಿ ಆರು ತಿಂಗಳಿಂದ ಪೈಪ್‌ಲೈನ್‌ ಕೆ.ವಿ. ರಸ್ತೆಯ ನಾಲ್ಕು ಅಂತಸ್ತಿನ ಕಟ್ಟಡದ ಒಂದನೇ ಮಹಡಿಯ ಬಾಡಿಗೆ ಮನೆಯಲ್ಲಿ ಒಬ್ಬರೇ ಇದ್ದರು. ಬಾಡಿಗೆ ಮನೆಯನ್ನು ಸ್ನೇಹಿತೆಯರು ಕೊಡಿಸಿದ್ದರು. ಮಗು ಅಜ್ಜಿಯ ಜತೆಗಿತ್ತು. ದಂಪತಿ ವಿಚ್ಛೇದನ ಪಡೆದುಕೊಂಡಿರಲಿಲ್ಲ’ ಎಂದು ಪೊಲೀಸರು ಹೇಳಿದರು.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ