Breaking News

ನಿಪ್ಪಾಣಿ ಕ್ಷೇತ್ರದಲ್ಲಿ ರಾಜಕೀಯ ಭವಿಷ್ಯವಿದೆ: ಪ್ರಕಾಶ ಹುಕ್ಕೇರಿ

Spread the love

ಚಿಕ್ಕೋಡಿ: ‘ಸಹಕಾರಿ ಕ್ಷೇತ್ರ, ಶಿಕ್ಷಣ ರಂಗ ಹಾಗೂ ಸಮಾಜ ಸೇವೆಯಲ್ಲಿ ಮುಖಂಡ ಅಣ್ಣಾಸಾಹೇಬ ಹಲವೆ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲೂ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಬೋರಗಾಂವ ಭಾಗದಲ್ಲಿ ಕಾರ್ಯನಿರ್ವಹಿಸಿದ್ದು, ನಿಪ್ಪಾಣಿ ಕ್ಷೇತ್ರದಲ್ಲಿ ಅವರಿಗೆ ರಾಜಕೀಯ ಭವಿಷ್ಯವಿದೆ’ ಎಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಹೇಳಿದರು.

 

ನಿಪ್ಪಾಣಿ ತಾಲ್ಲೂಕಿನ ಬೋರಗಾಂವದ ವಿದ್ಯಾಸಾಗರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮುಖಂಡ ಅಣ್ಣಾಸಾಹೇಬ ಹವಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ ನಾಲ್ಕು ದಶಕಗಳಿಂದ ಬೋರಗಾಂವದಲ್ಲಿ ಶಿಕ್ಷಣ ಸಂಸ್ಥೆಯೊಂದನ್ನು ಕಟ್ಟಿ, ಬ್ಯಾಂಕ್ ಸ್ಥಾಪಿಸಿ ಸಹಸ್ರಾರು ಜನರ ಬಾಳಿಗೆ ಬೆಳಕಾಗಿರುವ ವಿದ್ಯಾಸಾಗರ ಶಿಕ್ಷಣ ಸಂಸ್ಥೆ ಹಾಗೂ ಸಿದ್ದೇಶ್ವರ ಕೋ ಆಪ್ ಕ್ರೆಡಿಟ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಣ್ಣಾಸಾಹೇಬ ಹವಲೆ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ’ ಎಂದರು.


Spread the love

About Laxminews 24x7

Check Also

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Spread the loveಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ