Breaking News

ಸಿಡಿಲು ಬಡಿದು ರೈತ ಸಾವು

Spread the love

ಧಾರವಾಡ: ತಾಲ್ಲೂಕಿನ ಹನುಮನಾಳ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ರೈತ ಭೀಮನಗೌಡ ಮಲ್ಲನಗೌಡ ಪಾಟೀಲ (65) ಮೃತಪಟ್ಟಿದ್ಧಾರೆ.

ಅವರು ಮಧ್ಯಾಹ್ನ ಹೊಲದಿಂದ ವಾಪಸ್ಸಾಗುವಾಗ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ಧಾರೆ.

ಧಾರವಾಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಾಧಾರಣ ಮಳೆಯಾಗಿದೆ.

‌ಕುಂದಗೋಳ, ಧಾರವಾಡ, ಉಪ್ಪಿನಬೆಟಗೇರಿ ಹುಬ್ಬಳ್ಳಿ ಭಾಗದಲ್ಲಿಯೂ ಗುಡುಗಿನ ಆರ್ಭಟ ಸಹಿತ ಮಳೆಯಾಗಿದೆ.

ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗ ಸೇರಿ ಕೆಲವೆಡೆ ಆಗಾಗ ಬಿರುಸಿನ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಕೆಲ ಹೊತ್ತು ಬಿರುಸಿನ ಮಳೆ ಸುರಿದಿದ್ದರೆ, ಹಳಿಯಾಳ, ಮುಂಡಗೋಡ, ಸಿದ್ದಾಪುರ, ದಾಂಡೇಲಿಯಲ್ಲಿ ಆಗಾಗ ಮಳೆ ಬಿದ್ದಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ