Breaking News

ಕೃಷಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಬೇಕು: ಪ್ರಲ್ಹಾದ ಜೋಶಿ

Spread the love

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು. ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ ಎಂದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ ಕೋಟಿ ಜಮೆ ಮಾಡಲಾಗಿದೆ. ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಾಗಿದೆ. ವಿವಿಧ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಯನ್ನು ಎಂಎಸ್‌ ಪಿ) ಹೆಚ್ಚಿಸಲಾಗಿದೆ ಎಂದರು.

ಸೌರಶಕ್ತಿ ಬಳಕೆಗೆ ರೈತರನ್ನು ಪ್ರೋತ್ಸಾಹಿಸಬೇಕು. ಕುಸುಮ, ಸೂರ್ಯ ಘರ್ ಯೋಜನೆಗಳ ಬಗ್ಗೆ ತಿಳಿಸಬೇಕು. ರಾಜ್ಯ ಸರ್ಕಾರ ವಿದ್ಯುತ್ ಪುಕ್ಕಟ್ಟೆಯಾಗಿ ಪೊರೈಸುತ್ತಿದೆ. ಪುಕ್ಕಟ್ಟೆಯಾಗಿ ವಿದ್ಯುತ್ ಪೂರೈಸಿ ಹಿಮಾಚಲ ಪ್ರದೇಶ ಸರ್ಕಾರ ದಿವಾಳಿಯಾಗಿದೆ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ