ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು.
ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ.
ಹೌದು ಈ ವಿಚಾರವಾಗಿ ಇಂದು ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು,ಬೆಂಬಲಿಗರೊಂದಿಗೆ ಸಭೆ ನಡೆಸಿದರು. ತಮ್ಮ ಎಲ್ಲ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ.
Laxmi News 24×7