Breaking News

ಹುಬ್ಬಳ್ಳಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಿ: ವೀರೇಶ ಧೂಪದಮಠ

Spread the love

ಹುಬ್ಬಳ್ಳಿ: ಸಾರ್ವಜನಿಕರ ಅನುಕೂಲ ಹಾಗೂ ಸುಗಮ ಆಡಳಿತದ ಹಿತದೃಷ್ಟಿಯಿಂದ ಹುಬ್ಬಳ್ಳಿ- ಧಾರವಾಡ ನಗರಗಳಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವೀರೇಶ ಧೂಪದಮಠ ಮನವಿ ಮಾಡಿದ್ದಾರೆ.

ಸದ್ಯ ಎರಡೂ ನಗರಗಳನ್ನು ಒಳಗೊಂಡಂತೆ ಒಂದೇ ಮಹಾನಗರ ಪಾಲಿಕೆ ಇದೆ.

ಆದರೆ ಹುಬ್ಬಳ್ಳಿ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿದರೆ ಸಾರ್ವಜನಿಕರು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಚೇರಿಗೆ ತೆರಳಿ ಕೆಲಸ, ಕಾರ್ಯಗಳನ್ನು ಬೇಗ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ.

ಸರ್ಕಾರದ ನಿಯಮಾನುಸಾರ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಬಹುದು. ಪ್ರತ್ಯೇಕ ಪಾಲಿಕೆ ಮಾಡದಿದ್ದರೆ ಸದ್ಯದ ಮಟ್ಟಿಗೆ ಧಾರವಾಡವನ್ನು ನಗರಸಭೆಯನ್ನಾದರೂ ಮಾಡಬೇಕು. ಕೆಲ ವರ್ಷಗಳ ಬಳಿಕ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Spread the love ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ