Breaking News

ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ

Spread the love

ಲಬುರಗಿ: ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.

ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ ಮಾತುಕತೆಗೆಂದು ಹೋಗಿದ್ದಾರೆ.‌ ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಸಚಿನ್ ಸಹೋದರ ಸುಮಿತ್‌ ಗೆ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ. ಪರಿಣಾಮ ಸುಮಿತ್ ಕೊನೆಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಮೊದಲು ಕೊಲೆ ಯತ್ನ ತದನಂತರ ಕೊಲೆ ಎಂಬುದಾಗಿ ಪ್ರಕರಣ ದಾಖಲಿಸಿಕೊಂಡು ಆರು ಜನ ಆರೋಪಿಗಳನ್ನು ತಕ್ಷಣವೇ ಬಂಧಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಢಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಕೊಲೆಗೆ ಸಂಬಂಧಿಸಿದಂತೆ ಪ್ರೀತಿಸಿದ ಯುವತಿ ಉಷಾ ಅಲಿಯಾಸ್ ವೈಷ್ಣವಿ, ಸಹೋದರ ವರುಣ್‌ ಕುಮಾರ ಹಾಗೂ ಯುವತಿಯ ತಂದೆ ರಾಜಕುಮಾರ ಮತ್ತು ತಾಯಿ ಜಯಮ್ಮ ಮತ್ತು ವರುಣನ ಸ್ನೇಹಿತರಾದ ಸಿದ್ದು ಜಮಾದಾರ, ಪ್ರಜ್ವಲ ಎನ್ನುವ ಆರು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರ ಬಂಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಆಯುಕ್ತರು ವಿವರಣೆ ನೀಡಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ