Breaking News

ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Spread the love

ಹುಬ್ಬಳ್ಳಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಸೋಮವಾರ (ಸೆ.23) ನಗರದ ಹೊರವಲಯದ ತಾರಿಹಾಳ ಸೇತುವೆ ಬಳಿ ನಡೆದಿದೆ.

ಸುಲಿಗೆಕೋರ ವಿನೋದ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದಾಗ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ.‌

ಆಗ ಪಿಎಸ್ ಐ ಜಯಶ್ರೀ ಚಲವಾದಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಜಯಶ್ರೀ ಹಾಗೂ ಪೇದೆ ರಮೇಶ ಹಿತ್ತಲಮನಿ ಗಾಯಗೊಂಡಿದ್ದು, ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಧಿತ ವಿನೋದ ಮೇಲೆ ಸಿಲಿಗೆಗೆ ಸಂಬಂಧಿಸಿ ಬೆಂಡಿಗೇರಿ ಮತ್ತು ಕಸಬಾಪೇಟೆ ಠಾಣೆಯಲ್ಲಿ ಮೂರು ಪ್ರಕರಣ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವಿವಿಧ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ