Breaking News

ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

Spread the love

ಬೆಂಗಳೂರು: ದಿನದಿಂದ ದಿನಕ್ಕೆ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮದ ಕುಣಿಕೆ ಬಿಗಿಯಾಗುತ್ತಿದ್ದು, ಮುಂದುವರಿದ ಭಾಗವಾಗಿ ಅವರ ಮೇಲೆ ಈಗ ವಿಧಾನಸಭೆ ಸದಸ್ಯತ್ವ ಸ್ಥಾನದ ಅಮಾನತಿನ ತೂಗುಗತ್ತಿ ನೇತಾಡುತ್ತಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.

ಪಾಟೀಲ ಸೋಮವಾರ ಮುನಿರತ್ನ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅಮಾನತುಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರಕಾರ ಮುನಿರತ್ನ ಶಾಸಕತ್ವ ಅಮಾನತು ಕ್ರಮಕ್ಕೆ ಮುಂದಡಿ ಇಟ್ಟಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧಃಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ, ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ. ಆದ್ದರಿಂದ ಸಭಾಧ್ಯಕ್ಷರು ತಮಗೆ ಸಂವಿಧಾನದತ್ತವಾಗಿ ಪ್ರದತ್ತವಾಗಿರುವ ಪರಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಲೋಕಸಭಾಧ್ಯಕ್ಷರಾಗಿದ್ದ ಸೋಮನಾಥ ಚಟರ್ಜಿ ಅವರು ಲಂಚ ಪ್ರಕರಣದಲ್ಲಿ 17 ಸಂಸದರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಿದ್ದ ಸನ್ನಿವೇಶವನ್ನು ಉಲ್ಲೇಖೀಸಿರುವ ಸಚಿವ ಎಚ್‌.ಕೆ.ಪಾಟೀಲ್‌, ಅಂದು ಸಂಸತ್ತು ಹಾಕಿದ್ದ ಮೇಲ್ಪಂಕ್ತಿಯು ಇಂತಹ (ಮುನಿರತ್ನ ಪ್ರಕರಣದಂತಹ) ಘಟನೆಗಳು ನಡೆದಾಗ ಕರ್ನಾಟಕಕ್ಕೆ ಮಾರ್ಗದರ್ಶಕವಾಗಬೇಕಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ