ಬೆಳಗಾವಿ : ಪ್ರೀತಿಸಿದ ಬಾಲಕಿಯೊಂದಿಗೆ ಮದುವೆ ಮಾಡಿಕೊಡಲು ಒಪ್ಪದಿರುವ ಹುಡುಗಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಖಾನಾಪುರದ ಗಾಂಧಿನಗರದಲ್ಲಿ ನಡೆದಿದೆ.
ಸಂತೋಷ ರಾಮು ವಡ್ಡರ(22) ಹುಡುಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಯುವಕ.
ಹಲವು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದನು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪ್ರೀತಿಯ ವಿಷಯ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ಬಾಲಕಿಯ ಮನೆಯಲ್ಲಿ ವಿವಾಹಕ್ಕೆ ಒಪ್ಪಿರಲಿಲ್ಲ.
ಇದರಿಂದ ಯುವಕ ಮದುವೆಯಾಗುವುದಾಗಿ ಪದೇ ಪದೆ ತೊಂದರೆ ನೀಡುತ್ತಿದ್ದನು. ಇತ್ತಿಚೇಗೆ ಅಷ್ಟೇ ಅವರ ಮನೆಯ ಮೇಲೆ ದಾಳಿ ಮಾಡಿದ್ದನು. ಭಯಗೊಂಡ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದ ಕಾರಣ ಕೋಪಗೊಂಡ ಆರೋಪಿ, ಬಾಲಕಿಯ ತಾಯಿಯ ಮೇಲೆ ಹಲ್ಲೆ ಮಾಡಿದ್ದಾನೆ.
ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.