ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 12 ದಿನ ಎಸ್‌ಐಟಿ ಕಸ್ಟಡಿಗೆ SIT Custody ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.
ಇದರ ಬೆನ್ನಲ್ಲೆ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.