Breaking News

ಜಮ್ಮು-ಕಾಶ್ಮೀರದಲ್ಲಿ ಎರಡನೇ ಹಂತದ ಮತದಾನ ಆರಂಭ

Spread the love

ಶ್ರೀನಗರ: 114 ಸಂಖ್ಯಾಬಲದ ಜಮ್ಮು-ಕಾಶ್ಮೀರ ವಿಧಾನಸಭೆಗೆ ಇಂದು (ಅಕ್ಟೋಬರ್​ 25) ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಜಿಲ್ಲೆಗಳ ಒಟ್ಟು 26 ವಿಧಾನಸಭೆ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ನಾಯಕ ಒಮರ್ ಅಬ್ದುಲ್ಲಾ, ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಸೇರಿದಂತೆ ಹಲವರು ಅಖಾಡದಲ್ಲಿದ್ದಾರೆ.

 

ಎರಡನೇ ಹಂತದಲ್ಲಿ 25.78 ಲಕ್ಷ ಮತದಾರರು 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದು, ,502 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಇವುಗಳಲ್ಲಿ 1,056 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಮತ್ತು 2,446 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 06ರವರೆಗೆ ಮತದಾನ ನಡೆಯಲಿದೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ