ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಸಾರಿಗೆ ನಿಗಮಗಳು ರಾಜ್ಯಾದ್ಯಂತ ಜನರಿಗೆ ಪ್ರಯಾಣ ಸೇವೆ ಕಲ್ಪಿಸುತ್ತಿವೆ. ಒಂದು ದಿನ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾದರೂ ಪ್ರಯಾಣಿಕರ ಪರದಾಟ ನೋಡಲಾಗುವುದಿಲ್ಲ. ಆದರೆ, ಸಾರಿಗೆ ನೌಕಕರು ಇನ್ನೇನು ಕೆಲವೇ ದಿನಗಳಲ್ಲಿ ಬಸ್ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ವಿವಿಧ ಸಾರಿಗೆ ನೌಕರರ ಸಂಘಟನೆಗಳು ಜೊತೆಗೂಡಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರಂತೆ. ಹಾಗಾಗಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ನಾಲ್ಕೂ ನಿಗಮಗಳ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ಶಾಕ್ ಕೊಡಲು ತೀರ್ಮಾನಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಈಗಾಗಲೇ ಇದೇ 26ರವರೆಗೆ (ನಾಳೆ) ಡೆಡ್‌ಲೈನ್ ಕೂಡ ನೀಡಿದ್ದಾರೆ. ಅಷ್ಟರೊಳಗೆ ಸರ್ಕಾರ ಸಾರಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಷ್ಕರದ ದಿನಾಂಕ ಘೋಷಣೆ ಮಾಡುವುದಾಗಿ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ. ಈ ಸಂಬಂಧ ಸೆಪ್ಟೆಂಬರ್ 27ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಿಸಲಿದ್ದಾರೆ.
Laxmi News 24×7