Breaking News

ಕೇಂದ್ರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರಬೇಕು: ಕಂಗನಾ ರನೌತ್

Spread the love

ವದೆಹಲಿ: ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರುವಂತೆ ಒತ್ತಾಯಿಸುವ ಮೂಲಕ ಬಾಲಿವುಡ್‌ ನಟಿ, ಲೋಕಸಭೆ ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಮತ್ತೊಂದು ಸುತ್ತಿನ ವಿವಾದಕ್ಕೆ ಅಡಿಯಿಟ್ಟಂತೆ ಕಾಣುತ್ತಿದೆ.

ಕೇಂದ್ರದ ಕೃಷಿ ಕಾನೂನುಗಳ ಕುರಿತು ಕಂಗನಾ ರನೌತ್ ಮಾತನಾಡಿರುವ ವಿಡಿಯೊವೊಂದು ‘ಎಕ್ಸ್‌’ನಲ್ಲಿ ಹರಿದಾಡುತ್ತಿದೆ.

ಆದರೆ, ಇದು ಯಾವಾಗ ಮಾತನಾಡಿರುವ ವಿಡಿಯೊ ಎಂಬುದು ಸ್ಪಷ್ಟವಾಗಿಲ್ಲ.

‘ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮರಳಿ ಜಾರಿಗೆ ತರಬೇಕು. ನನ್ನ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನಾನು ಭಾವಿಸುತ್ತೇನೆ. ರೈತರ ಹಿತಾಸಕ್ತಿಗೆ ಅನುಕೂಲವಾಗುವಂತಹ ಕೃಷಿ ಕಾನೂನುಗಳನ್ನು ಯಾವುದೇ ಅಡ್ಡಿಯಾಗದಂತೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸುತ್ತೇನೆ’ ಎಂದು ಕಂಗನಾ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.

‘ರೈತರು ದೇಶದ ಅಭಿವೃದ್ಧಿಯಲ್ಲಿ ಆಧಾರ ಸ್ತಂಭವಾಗಿದ್ದಾರೆ. ಕೆಲವು ರಾಜ್ಯಗಳಲ್ಲಿ ಮಾತ್ರ ರೈತರು ಕೃಷಿ ಕಾನೂನುಗಳನ್ನು ವಿರೋಧಿಸಿದ್ದಾರೆ. ರೈತರ ಹಿತಾಸಕ್ತಿಗಾಗಿ ಕೃಷಿ ಕಾನೂನುಗಳನ್ನು ಮರಳಿ ಜಾರಿಗೆ ತರಬೇಕು ಎಂದು ನಾನು ಕೈ ಜೋಡಿಸಿ ಮನವಿ ಮಾಡುತ್ತೇನೆ’ ಎಂದು ಕಂಗನಾ ಹೇಳಿದ್ದಾರೆ. ಇದೇ ವಿಡಿಯೊವನ್ನು ಕಾಂಗ್ರೆಸ್‌ ಕೂಡ ‘ಎಕ್ಸ್‌’ನಲ್ಲಿ ಹಂಚಿಕೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ