ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
ರಬಕವಿ-ಬನಹಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳಷ್ಟು ನುರಿತ, ಅನುಭವಿ ರಾಜಕಾರಣಿಯಾಗಿದ್ದು, ಹಿಂದಿನ ಪರಂಪರೆ ಅವಲೋಕಿಸಿದಾಗ ಇಂತಹ ತೀರ್ಮಾನ ಬಂದ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಅವಕಾಶ ನೀಡಬೇಕು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್ ಹೇಳಿದರು.
ಮಂಗಳವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂದು ಹೇಳಿದ್ದು ಸರಿಯಲ್ಲ. ಅವರ ಆಡಳಿತದಲ್ಲಿ ಹಲವು ಪ್ರಕರಣಗಳ ನೋಡಿದಾಗ ಕಾಂಗ್ರೆಸ್ ಪಕ್ಷವೇ ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂಬುದು ಗೊತ್ತಾಗುತ್ತದೆ ಎಂದು ಗದ್ದಿಗೌಡರ್ ತಿಳಿಸಿದರು.
ಶಾಸಕ ಸಿದ್ದು ಸವದಿ ಮಾತನಾಡಿ, ಇದು ಸತ್ಯಕ್ಕೆ ಜಯವಾಗಿದೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದ್ದು, ರಾಜ್ಯವನ್ನು ಅಧೋಗತಿಗೆ ತಂದು ಬಿಟ್ಟಿದೆ. ಬಿಜೆಪಿ ಮಿತ್ರ ಪಕ್ಷಗಳು ಮುಖಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಹೋರಾಟ ಮಾಡುತ್ತವೆ. ಕೇವಲ ಮುಡಾ ಹಗರಣ ಮಾತ್ರವಲ್ಲ, ಎಸ್.ಟಿ ನಿಗಮದ ಹಣ ಲೂಟಿ ಹೊಡೆದಿದ್ದಾರೆ.
Laxmi News 24×7