Breaking News

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಮಾನವೀಯತೆ ಮೆರೆದಿದ್ದಾರೆ.

Spread the love

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಮಾನವೀಯತೆ ಮೆರೆದಿದ್ದಾರೆ.ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ರೇಣುಕಾಚಾರ್ಯ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಗೊಲ್ಲರಹಳ್ಳಿ ಸಮೀಪ ಬೈಕ್ ಅಪಘಾತವಾಗಿತ್ತು. ಘಟನೆಯಲ್ಲಿ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡು ಬಿದ್ದಿದ್ದನು.

ಈ ವೇಳೆ ರೇಣುಕಾಚಾರ್ಯ ಅವರು ಅದೇ ದಾರಿಯಲ್ಲಿ ಕುಂದೂರು ಗ್ರಾಮಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಅಪಘಾತದ ಮಾಹಿತಿ ಅರಿತ ಶಾಸಕರು ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಸ್ಥಳೀಯರ ಸಹಾಯದಿಂದ ಆರೈಕೆ ಮಾಡಿದರು. ನಂತರ ತನ್ನ ಬೆಂಬಲಿಗರ ಸಹಾಯದಿಂದ ದಾರಿಯಲ್ಲಿ ಹೋಗುತ್ತಿದ್ದ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ