ಶಿರಸಿ: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ ಪ್ರತಿಕ್ರಿಯೆ ನೀಡಿದರು.
ಅವರು ಸೆ.24ರ ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಧಿವೇಶದಲ್ಲಿ ವಿಧಾನಸಭೆ ಒಳಗಡೆ ಹಾಗೂ ಹೊರಗಡೆಯೂ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ.
ಅವರ ಆರೋಪವನ್ನು ನಾವು ಒಪ್ಪುವುದಿಲ್ಲ. ಬಿಜೆಪಿಯು ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ. ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಮುಖ್ಯಮಂತ್ರಿಗೆ ಖಂಡಿತ ನ್ಯಾಯ ದೊರೆಯಲಿದೆ ಎಂದರು.
ಈ ವೇಳೆ ನಗರಸಭಾ ಸದಸ್ಯ ಪ್ರದೀಪ ಶೆಟ್ಟಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಮತ್ತಿತರರು ಇದ್ದರು.
Laxmi News 24×7