Breaking News

ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ. ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

Spread the love

ಯಾದಗಿರಿ: ಸೋಮವಾರ(ಸೆ. 23) ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

 

ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

ಸಿಡಿಲು ಬಡಿದು ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ಹೇಳಿದರು.

ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ