Breaking News

ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Spread the love

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನಿಗೆ ತಲೆ ಬಾಗುತ್ತಾರೆ ಎನ್ನುವ ವಿಶ್ವಾಸವಿದೆ. ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳಿಲ್ಲ.

ಬೇರೆಯವರು ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

 

ರೈಲ್ವೆ ಖಾತೆ ರಾಜ್ಯ ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಜೀವನ ತೆರೆದ ಪುಸ್ತಕ ಎಂದು ಹೇಳಿಕೊಳ್ಳುತ್ತಾರೆ. ಆ ಪುಸ್ತಕದಲ್ಲಿ ಕೆಲವು ತಪ್ಪುಗಳಾಗಿವೆ ಎಂದು ಕೋರ್ಟ್ ಹೇಳಿದೆ.

ಕಾನೂನಿಗೆ ಗೌರವ ಸಲ್ಲಿಸಬೇಕಾದದ್ದು ಎಲ್ಲರ ಕರ್ತವ್ಯ. ಈ ಆರೋಪದಿಂದ ಹೊರಬರುವವರೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹಿಂದೆ ಇಂತಹ ಪರಿಸ್ಥಿತಿ ಎದುರಾದಾಗ ರಾಜೀನಾಮೆ ನೀಡಿ ನಂತರ ಅಧಿಕಾರ ಪಡೆದುಕೊಂಡಿರುವ ಉದಾಹರಣೆಗಳಿವೆ ಎಂದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ