Breaking News

ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ

Spread the love

ಬೈಲಹೊಂಗಲ: ಸಾರಿಗೆ ಸಂಸ್ಥೆ ಬಸ್ ಮತ್ತು ಸೋಯಾಬೀನ್ ರಾಶಿ ಯಂತ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು ಸುಮಾರು 6 ಕ್ಕಿಂತ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಮಲಪ್ರಭಾ ನದಿ ಸಮೀಪ ಬುಧವಾರ (ಸೆ.25) ಮಧ್ಯಾಹ್ನ ಸಂಭವಿಸಿದೆ.

ಸಾರಿಗೆ ಬಸ್ ಧಾರವಾಡದಿಂದ ಬೈಲಹೊಂಗಲ ಮಾರ್ಗ ಮಧ್ಯೆ ಬರುವಾಗ ಮಲಪ್ರಭಾ ನದಿ ಪಕ್ಕದಲ್ಲಿ ಸೋಯಾಬೀನ್ ರಾಶಿ ಯಂತ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭೀಕರ ಅಪಘಾತ ತಪ್ಪಿಸಲು ಕಬ್ಬಿನ ಗದ್ದೆಗೆ ಬಸ್ ನುಗ್ಗಿಸಿದ್ದಾನೆ.

ಗಾಯಗೊಂಡ ನಿರ್ವಾಹಕ ಹಾಗೂ ಪ್ರಯಾಣಿಕರನ್ನು ಸಮಾಜ ಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಜಾಲಿಕೊಪ್ಪ ಗ್ರಾಮಸ್ಥರು 108 ಆಂಬುಲೆನ್ಸ್ ಮೂಲಕ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ