Breaking News

ಉಚಿತ ಹೊಲಿಗೆ ಯಂತ್ರ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

Spread the love

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.30 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್‍ ನಲ್ಲಿ ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರಗೆ ವಿಸ್ತರಿಸಲಾಗಿದೆ.

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : `ಉಚಿತ ಹೊಲಿಗೆ ಯಂತ್ರ' ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್‍, ಜಯನಗರ, ಬೆಂಗಳೂರು-11 ಅಥವಾ ದೂರವಾಣಿ ಸಂಖ್ಯೆ : 080-26632792, 26542307 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ