Breaking News

ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಪಡಿಸಲು ಆಗ್ರಹ

Spread the love

ಬೆಳಗಾವಿ: ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಶಿಂಧೆ, ‘ನಾವು ತಾಂತ್ರಿಕವಾಗಿ ಅನುಭವಿ ಸಿಬ್ಬಂದಿಯಲ್ಲ. ಆದರೂ, ಸರ್ಕಾರ ವಹಿಸಿದ ತಾಂತ್ರಿಕ ಕೆಲಸ ನಿರ್ವಹಿಸುತ್ತಿದ್ದೇವೆ. ಮೂಲಸೌಕರ್ಯ ವಿಚಾರವಾಗಿ ಕಡೆಗಣನೆಗೆ ಒಳಗಾಗಿದ್ದೇವೆ. ಹಾಗಾಗಿ ಕೆಲಸಕ್ಕೆ ಸಾಮೂಹಿಕವಾಗಿ ರಜೆ ಹಾಕಿ ಧರಣಿ ಮಾಡುತ್ತಿದ್ದೇವೆ’ ಎಂದರು.

‘ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಸುಸಜ್ಜಿತವಾದ ಕಚೇರಿ ಕಲ್ಪಿಸಬೇಕು. ಅಲ್ಲಿ ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆ ಒದಗಿಸಬೇಕು. ಸಂಯೋಜನೆ, ಇ-ಆಫೀಸ್‌, ಗರುಡ, ಭೂಮಿ, ನವೋದಯ, ದಿಶಾಂಕ ಮತ್ತಿತರ ತಂತ್ರಾಂಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ನೀಡಬೇಕು’ ಎಂದು ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದರು.

ಕಿರಣ ತೊರಗಲ್ಲ, ಅನಿಲ ಕಮ್ಮಾರ, ಏಕನಾಥ ಅಳಗುಂಡಿ, ಉಮೇದ‌ ಕಾಪಸೆ, ಎನ್.ಪಿ.ಸವದತ್ತಿ ಇತರರಿದ್ದರು.


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ