Breaking News

ಮಹಾಲಕ್ಷ್ಮಿ ನನ್ನ ಮಗನ ವಿರುದ್ಧ ‘ಹನಿಟ್ರ್ಯಾಪ್’ ಮಾಡಿದ್ದಳು : ಆರೋಪಿಯ ತಾಯಿ ಸ್ಪೋಟಕ ಹೇಳಿಕೆ!

Spread the love

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈಯಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ಅವರ ತಾಯಿ ಮಹಾಲಕ್ಷ್ಮಿ ವಿರುದ್ಧ ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ತಾಯಿ ಕುಂಜಲತಾ ರಾಯ್, ನನ್ನ ಮಗನ ವಿರುದ್ಧ ಕೊಲೆಯಾದ ಮಹಿಳೆ ಟ್ರ್ಯಾಪ್ ಮಾಡಿದ್ದಳು.

ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು ಬೆಂಗಳೂರು ತೊರೆಯುವಂತೆ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ.

ಮುಕ್ತಿ ರಂಜನ್ ರಾಯ್ ಹಾಗೂ ಮಹಾಲಕ್ಷ್ಮಿ ಬೆಂಗಳೂರಿನ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಮೊದಲ ಪರಿಚಯ ಸ್ನೇಹದಿಂದ ಆರಂಭವಾಗಿ ನಂತರ ಪ್ರೀತಿಗೆ ತಿರುಗಿತ್ತು. ಬಳಿಕ ಮಹಾಲಕ್ಷ್ಮಿ ಮುಕ್ತಿ ರಂಜನ್ ರಾಯ್ಗೆ ಮದುವೆಯಾಗು ಎಂದು ಪೀಡಿಸುತ್ತಿದ್ದಳು.ಇದಕ್ಕೆ ಬೇಸತ್ತು ಮುಕ್ತಿ ರಂಜನ್ ರಾಯ್ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದ.ಬಳಿಕ ಒಡಿಶಾಕೆ ತೆರಳಿ ಪೊಲೀಸರು ಎಲ್ಲಿ ನನ್ನನ್ನು ಅರೆಸ್ಟ್ ಮಾಡುತ್ತಾರೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


Spread the love

About Laxminews 24x7

Check Also

ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್

Spread the love ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ