Breaking News

ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ  ಮೋಡ ಕವಿದ ವಾತಾವರಣ ಚಳಿಯೊಂದಿಗೆ ಜಿಟಿ ಜಿಟಿ ಮಳೆ

Spread the love

ಬೆಳಗಾವಿ : ನಿವಾರ್ ಚಂಡಮಾರುತ ಪರಿಣಾಮದಿಂದ ಬೆಳಗಾವಿ ನಗರದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ  ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮತ್ತು ಸಾಧಾರಣ ಪ್ರಮಾಣದ ಮಳೆಯಾಗಿತ್ತಿದೆ.

ಬೆಳಗಾವಿಯಲ್ಲೂ ನಿವಾರ್​ ತನ್ನ ಪ್ರಭಾವ ಬೀರಿದ್ದು, ಹಲವೆಡೆ ಬೆಳಿಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಮೊಡ ಮುಸುಕಿದ ವಾತಾವರಣ, ಕೊರಿಯುವ ಚಳಿಗೆ ಜನ ಹೈರಾಣಾಗಿದ್ದಾರೆ. ಜೊತೆಗೆ ತುಂತುರು ಮಳೆ ಸೇರಿ ಜನ ಮನೆಗಳಿಂದ ಹೊರ ಬರದಂತೆ ಮಾಡಿದೆ.

ಮುಂಜಾನೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೂ  ಮೋಡ ಕವಿದ ವಾತಾವರಣ ಇದೆ.   11 ಗಂಟೆಯ ಸುಮಾರಿಗೆ ಧಾರವಾಡ, ಬೆಳಗಾವಿ ಸೇರಿ ರಾಜ್ಯದ ಹಲವೆಡೆ ಚುಮು ಚುಮು ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ನಿವಾರ್ ಚಂಡಮಾರುತ ಪರಿಣಾಮದಿಂದ ನಿರೀಕ್ಷಿತ ಪ್ರಮಾಣದ ಮಳೆ ರಾಜ್ಯದಲ್ಲಿ ಆಗಲಿಲ್ಲ. ಭೂ ಸ್ಪರ್ಶವಾದ ನಂತರ ಚಂಡಮಾರುತ ದುರ್ಬಲಗೊಳ್ಳಬೇಕಿತ್ತು. ಆದರೆ ಅದು ಮತ್ತೆ ಸಮುದ್ರಕ್ಕೆ ಹೋಗಿರುವುದರಿಂದ  ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಮುಂದಿನ ವಾರ ಮತ್ತೆ ಮಳೆ ಬರುವ ಮುನ್ಸೂಚನೆಗಳಿರುವುದರಿಂದ ರೈತರಿಗೆ ತೊಂದರೆಯಾಗಲಿದೆ. ಬೆಳೆ ಹಾನಿಯೂ ಉಂಟಾಗಬಹುದು. ಡಿಸೆಂಬರ್ ಮೊದಲೆರಡು ವಾರದಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗುವ ನಿರೀಕ್ಷೆ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ