Breaking News

ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

Spread the love

ಬೆಂಗಳೂರು: “ಮುಡಾ ಹಗರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ. ನಾನು ರಾಜೀನಾಮೆ ಕೊಡುವುದೂ ಇಲ್ಲ’.

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಡಕ್‌ ನುಡಿ. ದಿನೇ ದಿನೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಮುಡಾ ಪ್ರಕರಣ ಲೋಕಾಯುಕ್ತ ತನಿಖೆಗೆ ನ್ಯಾಯಾಲಯದಿಂದ ಶಿಫಾರಸುಗೊಂಡಿದ್ದು, ಎಫ್‌ಐಆರ್‌ ದಾಖಲಾದರೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಪಟ್ಟುಹಿಡಿದ್ದಾರೆ.

 

ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಆದೇಶ ಪ್ರತಿಯನ್ನು ಅವಲೋಕಿಸಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದರು. ಅನಂತರ ಕೇರಳಕ್ಕೆ ತೆರಳಿದ್ದ ಅವರು ಕಾರ್ಯಕ್ರಮವೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ರಾತ್ರಿ ಬೆಂಗಳೂರಿಗೆ ವಾಪಸಾದರು. ಗುರುವಾರ ಬೆಳಗ್ಗೆ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಸೇರಿದಂತೆ ಹಲವರೊಂದಿಗೆ ಸಮಾಲೋಚನೆ ನಡೆಸಿದರು. ಮಧ್ಯಾಹ್ನ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಏಕೆಂದರೆ ಈ ಪ್ರಕರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ ಎಂದರು


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ