Breaking News

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ. ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

Spread the love

ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ ಇರಿದ ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.

ಬುಧವಾರ ಸಂಜೆ ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ ಪ್ರೀತಿಸುತ್ತಿದ್ದ. ಇದಕ್ಕೆ ಯುವತಿ ಹಾಗೂ ತಾಯಿ ಒಪ್ಪದ ಕಾರಣ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರು ದಾಖಲು ಮಾಡಿಕೊಂಡಿದ್ದಾರೆ.

ಆರೋಪಿಗೆ ಗುಂಡೇಟು: ಸಂಜೆ ವೇಳೆ ಯುವತಿ ಮನೆಗೆ ತೆರಳಿದ್ದ ಮಹೇಶ ದಾಂದಲೆ ಮಾಡಿ ಯುವತಿಯ ತಾಯಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಬಂಧನ ನಂತರ ಈ ಕೃತ್ಯ ಎಸಗಿ ಪರಾರಿಯಾಗಲು ಸ್ನೇಹಿತರ ಬಳಿ ಹಣ ಪಡೆದಿರುವುದಾಗಿ ಮಾಹಿತಿ ನೀಡಿದ್ದ. ಅವರನ್ನು ತೋರಿಸುವುದಾಗಿ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಹಳೇ ಹುಬ್ಬಳ್ಳಿ ಇನ್‌ಸ್ಪೆಕ್ಟರ್ ಸುರೇಶ ಯಳ್ಳೂರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಹಳೇ ಹುಬ್ಬಳ್ಳಿ ಇನ್‌ಸ್ಪೆಕ್ಟರ್ ಸುರೇಶ ಯಳ್ಳೂರು ಹಾಗೂ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ