ಪ್ರಮುಖ ದಾಖಲೆಗಲ್ಲಿ ಪಡಿತರ ಚೀಟಿಯೂ ಕೂಡ ಒಂದಾಗಿದೆ. ಇನ್ನು ಒಂದು ವೇಳೆ ಪಡಿತರ ಚೀಟಿದಾರರು ಸೆಪ್ಟೆಂಬರ್ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರೇಷನ್ ನೀಡುವುದನ್ನು ನಿಲ್ಲಿಸಲಾಗಿತ್ತದೆ ಎಂದು ಸರ್ಕಾರ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.

ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿಲ್ಲ. ಇಂತಹವರು ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ನಿಲ್ಲಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದೆ. ಎಲ್ಲಾ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ 7ರಿಂದ ರಾತ್ರಿ 9ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮೇಲೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ರೇಷನ್ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
Laxmi News 24×7