Breaking News

ಪಡಿತರ ಚೀಟಿದಾರರು ಸೆಪ್ಟೆಂಬರ್ ಅಂತ್ಯದೊಳಗೆ ಈ ಕೆಲ್ಸ ಮಾಡದಿದ್ರೆ ರೇಷನ್‌ ಸ್ಥಗಿತ

Spread the love

ಪ್ರಮುಖ ದಾಖಲೆಗಲ್ಲಿ ಪಡಿತರ ಚೀಟಿಯೂ ಕೂಡ ಒಂದಾಗಿದೆ. ಇನ್ನು ಒಂದು ವೇಳೆ ಪಡಿತರ ಚೀಟಿದಾರರು ಸೆಪ್ಟೆಂಬರ್‌ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರೇಷನ್‌ ನೀಡುವುದನ್ನು ನಿಲ್ಲಿಸಲಾಗಿತ್ತದೆ ಎಂದು ಸರ್ಕಾರ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.

Ration Card: ಪಡಿತರ ಚೀಟಿದಾರರು ಸೆಪ್ಟೆಂಬರ್ ಅಂತ್ಯದೊಳಗೆ ಈ ಕೆಲ್ಸ ಮಾಡದಿದ್ರೆ ರೇಷನ್‌ ಸ್ಥಗಿತ

ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿಲ್ಲ. ಇಂತಹವರು ಸೆಪ್ಟೆಂಬರ್‌ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ನಿಲ್ಲಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಈ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದೆ. ಎಲ್ಲಾ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ 7ರಿಂದ ರಾತ್ರಿ 9ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮೇಲೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ರೇಷನ್‌ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ