Breaking News

ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್‌ಲಾಕ್‌ 6 ಮಾರ್ಗಸೂಚಿ

Spread the love

ಬೆಂಗಳೂರು,ನ.28- ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್‌ಲಾಕ್‌ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಹೊಸ ಮಾರ್ಗಸೂಚಿ ಡಿಸೆಂಬರ್ 31ರವರೆಗೆ ಜಾರಿಯಲ್ಲಿರುತ್ತದೆ. ಮಾರ್ಗಸೂಚಿಯಲ್ಲಿ ಕೊರೊನಾ ಹಿನ್ನೆಲೆ ಮುಖ್ಯವಾಗಿ ಕಣ್ಗಾವಲು, ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಒಳಗೊಂಡ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

ಕಂಟೇನ್ಮೆಂಟ್ ವಲಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವುದು, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ರಾತ್ರಿ ಕಫ್ರ್ಯೂನಂತಹ ಸ್ಥಳೀಯ ನಿರ್ಬಂಧಗಳನ್ನು ವಿಧಿಸಬಹುದು. ಆದರೆ, ಕಂಟೇನ್ಮೆಂಟ್ ವಲಯಗಳ ಹೊರಗೆ ಯಾವುದೇ ಲಾಕ್ಡೌನ್ ವಿಧಿಸಲು ರಾಜ್ಯ ಸರ್ಕಾರದ ಅನುಮತಿ ಅತ್ಯಗತ್ಯ ಎಂದು ತಿಳಿಸಲಾಗಿದೆ.

# ಯಾವ್ಯಾವುದಕ್ಕೆ ನಿರ್ಬಂಧಿತ ಅನುಮತಿ?:
ಪ್ರಯಾಣಿಕರ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ- ಕ್ರೀಡಾಪಟುಗಳ ತರಬೇತಿಗಾಗಿ ಈಜುಕೊಳಗಳ ಬಳಕೆ- ಶೇ.50ರಷ್ಟು ಸಾಮಥ್ರ್ಯದೊಂದಿಗೆ ಚಿತ್ರಮಂದಿರಗಳು, ಸಿನಿಮಾ ಹಾಲ್‍ಗಳಿಗೆ ಅನುಮತಿ- ಸಾಮಾಜಿಕ, ಧಾರ್ಮಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಭೆಗಳನ್ನು ನಡೆಸಬಹುದು. ಸಭಾಂಗಣದ ಸಾಮಥ್ರ್ಯದ ಶೇ.50ರಷ್ಟು ಜನರು ಭಾಗವಹಿಸಬಹುದು.

ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮಾತ್ರ ಅನುಮತಿ. ಜನರು ಮತ್ತು ಸರಕುಗಳ ಅಂತರ್-ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಪ್ರತ್ಯೇಕ ಅನುಮೋದನೆ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ