ಬೆಂಗಳೂರು: ಮುಡಾ ಹಗರಣ ಪ್ರಕರಣದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.
ಆದರೆ, ತನಿಖೆಯ ಭಾಗವಾಗಿ ಎಫ್‌ಐಆರ್ ದಾಖಲಾಗಿದ್ದೇ ಆದರೆ, ಈ ಬೆಂಬಲ ಇದೇ ರೀತಿ ಮುಂದುವರೆಯುತ್ತದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಹಂತದಲ್ಲಿ ಯಾವುದೇ ಬದಲಾವಣೆಗೆ ಹೈಕಮಾಂಡ್ ಸಿದ್ಧವಾಗಿಲ್ಲ. ಬದಲಾವಣೆಗೆ ಮುಂದಾದರೆ ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇದು ದೊಡ್ಡ ಷಡ್ಯಂತ್ರವಾಗಿದೆ ಎಂದು ಹೇಳಿದ್ದಾರೆ.
ದೆಹಲಿಯಿಂದ ಗ್ರಾಮ ಮಟ್ಟದವರೆಗೆ ಇಡೀ ಕಾಂಗ್ರೆಸ್ ಮತ್ತು ರಾಜ್ಯ ಸರ್ಕಾರ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತದೆ. ನಮ್ಮ ಸಿಎಂ ಯಾವುದೇ ತಪ್ಪು ಮಾಡಿಲ್ಲ, ಶೀಘ್ರದಲ್ಲೇ ದೋಷಮುಕ್ತರಾಗುತ್ತಾರೆಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಬಿಜೆಪಿಯವರು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ಕೇಸು ದಾಖಲಿಸಿ ಜೈಲಿಗೆ ಹಾಕಿದ ರೀತಿಯಲ್ಲಿಯೇ ನಮ್ಮ ಸಿಎಂ ವಿರುದ್ಧವೂ ಸಂಚು ರೂಪಿಸುತ್ತಿದ್ದಾರೆ, ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾ
Laxmi News 24×7