Breaking News

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಕಷ್ಟ: FIR ದಾಖಲಿಸುವಂತೆ ಕೋರ್ಟ್ ಸೂಚನೆ

Spread the love

ವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ತಿಲಕನಗರ ಪೊಲೀಸರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಿದೆ.

ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಸಚಿವೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕರಿ ಸಂಘರ್ಷ ಪರಿಷತ್ ಆದರ್ಶ್ ಆರ್.ಐಯ್ಯರ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ವಿಚಾರಣೆ ನಡೆಸಿದ ನ್ಯಾಯಾಲಯ ವಿತ್ತ ಸಚಿವರು ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದೆ.


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ