ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ರಹಸ್ಯ ವಿಡಿಯೋ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
ಕಾರವಾರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಾವುದೋ ಒಂದು ವೈಯಕ್ತಿಕ ವಿಡಿಯೋ ಎತ್ತಿಕೊಂಡು ಹೋಗಿ, ಎಂಎಲ್‍ಸಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೇ ಇತ್ತು. ಎಂಎಲ್‍ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋμïಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಕೇಳಿದ್ದೆ. ಅದರ ಸಂತ್ಯಾಂಶ ಏನಿದೆ ಎಂದು ಗೊತ್ತಿಲ್ಲ. ಅದೇ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದರು.
ಪ್ರಕರಣದಲ್ಲಿ ಗೌಪ್ಯವಾದ ವಿಚಾರ ಅಡಗಿದೆ. ಸರ್ಕಾರ ತನಿಖೆ ಮಾಡಿ ಅರ್ಥವಿಲ್ಲ ಎಂದು ಹೇಳಿದ ಡಿಕೆಶಿ, ಎಂಎಲ್‍ಸಿ, ಸಚಿವರು ಯಾರು ಎಂಬ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಲಿಲ್ಲ.
Laxmi News 24×7