Breaking News

ಬೆಳಗಾವಿ ಜಿಲ್ಲೆ ವಿಭಜನೆಗೆ ದಸರಾ ನಂತರ ಮನವಿ: ಲಕ್ಷ್ಮಿ ಹೆಬ್ಬಾಳಕರ

Spread the love

ಬೆಳಗಾವಿ: ‘ದಸರಾ ಮುಗಿದ ನಂತರ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ.

ಈ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ, ಮನವಿ ಪತ್ರ ಕೊಡುತ್ತೇವೆ. ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು’ ಎಂದರು.

‘ಪಂಚಮಸಾಲಿ ಮೀಸಲಾತಿ ಕುರಿತು ಚರ್ಚಿಸಲು ಸಿದ್ದರಾಮಯ್ಯ ಸಮಯ ಕೊಡುತ್ತಿಲ್ಲ. ನಮ್ಮ ಸಮುದಾಯದ ಶಾಸಕರೂ ಧ್ವನಿ ಎತ್ತುತ್ತಿಲ್ಲ’ ಎಂಬ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಲು ಶ್ರೀಗಳಿಗೆ ಹಿಂದೆಯೇ ಸಮಯ ಕೊಡಿಸಿದ್ದೇವೆ. ಸುವರ್ಣ ವಿಧಾನಸೌಧದಲ್ಲೂ ಭೇಟಿಗೆ ಅವಕಾಶ ಕೊಡಿಸಿದ್ದೆವು. ಶ್ರೀಗಳು ಏಕೆ ಹೀಗೆ ಹೇಳಿದರೋ ಗೊತ್ತಿಲ್ಲ. ನಾನು ಶ್ರೀಗಳ ಜತೆಗೆ ಮಾತನಾಡುತ್ತೇನೆ’ ಎಂದು ತಿಳಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ