Breaking News

ಬಾಡಿಗೆ ಮನೆಯಲ್ಲಿ ಅಂಗನವಾಡಿ: ಮಳೆ ಬಂದರೆ ಆತಂಕ

Spread the love

ಡವಿಸೋಮಾಪುರ (ತಡಸ): ಕುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಡವಿಸೋಮಾಪುರ ಗ್ರಾಮದಲ್ಲಿ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಯುತ್ತಿದ್ದು, ಮಳೆ ಬಂದರೆ ಹಂಚಿನ ಮನೆ ಸೋರುತ್ತಿದೆ. ಇದರಿಂದಾಗಿ ಮಕ್ಕಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ.

ಬಾಡಿಗೆ ಮನೆಯಲ್ಲಿ ಅಂಗನವಾಡಿ: ಮಳೆ ಬಂದರೆ ಆತಂಕ

ಅಡವಿಸೋಮಾಪುರ ಗ್ರಾಮದ 96ನೇ ಅಂಗನವಾಡಿ ಕೇಂದ್ರದ ಹಳೇ ಕಟ್ಟಡ ಎರಡು ವರ್ಷಗಳ ಹಿಂದೆ ಮಳೆಯಿಂದ ಹಾನಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು, ಮಕ್ಕಳನ್ನು ಬಾಡಿಗೆ ಹಂಚಿನ ಮನೆಗೆ ಸ್ಥಳಾಂತರಿಸಿದ್ದರು. ಎರಡು ವರ್ಷವಾದರೂ ನೂತನ ಕಟ್ಟಡ ನಿರ್ಮಿಸುವಲ್ಲಿ ಹಾಗೂ ಹಳೇ ಕಟ್ಟಡ ದುರಸ್ತಿ ಮಾಡುವಲ್ಲಿ ಅಧಿಕಾರಿಗಳು ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಮಕ್ಕಳಿಗೆ ನೀಡುವ ದವಸ ಧಾನ್ಯಗಳನ್ನು ಸಂಗ್ರಹಿಸಲು ಸೂಕ್ತ ಜಾಗವಿಲ್ಲ. ದವಸ ಧಾನ್ಯಗಳು, ಕೀಟ ಹಾಗೂ ಇಲಿಗಳ ಪಾಲಾಗುತ್ತಿವೆ. ಬಾಡಿಗೆ ಮನೆಯಲ್ಲಿ ಶೌಚಾಲಯದ ಸಮಸ್ಯೆ ಇದೆ. ಉತ್ತಮವಾದ ಮೈದಾನ ಸಹ ಇಲ್ಲ. ಹಂಚಿನ ಮನೆಯಾಗಿದ್ದರಿಂದ ಮಳೆ ಬಂದರೆ ಸೋರುವ ಸ್ಥಿತಿಯಿದೆ ಎಂದು ಗ್ರಾಮದ ಕಿರಣ್ ಕರೆಪ್ಪನವರ ದೂರಿದರು.

ಹಲವು ಬಾರಿ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಕ್ಕಳ ಪ್ರಾಣದ ಜೊತೆ ಅಧಿಕಾರಿಗಳು ಆಟವಾಡುತ್ತಿದ್ದಾರೆ. 25 ಮಕ್ಕಳು ಇರುವ ಅಂಗನವಾಡಿಯಲ್ಲಿ ಮೂಲ ಸೌಕರ್ಯ ಸಹ ಇಲ್ಲ ಎಂದು ಶೇಖಪ್ಪ ನವಲಗುಂದ ಅಳಲು ತೋಡಿಕೊಂಡರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ