ಚಿಕ್ಕೋಡಿ: ‘ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು.
ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಧೀರ ಬೋಲೆ, ಗರ್ಭಿಣಿ, ಬಾಣಂತಿಯರ ಆರೋಗ್ಯ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ಮಾಡಿದರು.
ಅಭಿಯಾನದ ಅಂಗವಾಗಿ ತಾಯಂದಿರಿಗೆ ಸಸಿಗಳನ್ನು ವಿತರಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಲಾಯಿತು.
ಇಂಗಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮನ ಶೆಳಕೆ, ಸದಸ್ಯರಾದ ರಾಧಿಕಾ ಶಿರಹಟ್ಟಿ, ಗೀತಾ ಮಗದುಮ್ಮ, ಕಾವೇರಿ ಲಂಗೋಟೆ, ಮಂಜುಳಾ ಐಹೊಳೆ, ರಾಣಿ ಪವಾರ, ಮೇಲ್ವಿಚಾರಕಿಯರಾದ ಜಿ.ಡಿ. ಖೋತ, ಭಾರತಿ ಹೆದ್ದೂರೆ, ಉಜ್ವಲಾ ಮಲಗೌಡರ, ರಾಜು ನಾಗರಾಳೆ ಸೇರಿದಂತೆ ಅನೇಕರು ಇದ್ದರು.