Breaking News

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ ಸಾಧ್ಯತೆ ಇದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ.

ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಹ ಪರಿಗಣಿಸಬೇಕು ಎಂದು ಕೋರಿದ್ದಾರೆ. ಹಬ್ಬದ ವೇಳೆ ರಜೆಗಳಿರುವುದರಿಂದ, ಮತದಾನ ಪ್ರಮಾಣ ಇಳಿಕೆಗೆ ಕಾರಣವಾಗಬಹುದು ಎನ್ನುವುದನ್ನು ಗಮನಕ್ಕೆ ತಂದಿದ್ದಾರೆ’ ಎಂದು ವಿವರಿಸಿದರು.

‘ಮಹಾರಾಷ್ಟ್ರ ವಿಧಾನಸಭೆಯ ಅವಧಿಯು ನವೆಂಬರ್‌ 26ಕ್ಕೆ ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ’ ಎಂದು ತಿಳಿಸಿದರು.

‘ನಗರ ಪ್ರದೇಶದ ಜನರ ನಿರಾಸಕ್ತಿ’

ನಗರ ಪ್ರದೇಶದಲ್ಲಿನ ಜನರು ತಮ್ಮ ಮತ ಚಲಾಯಿಸಲು ನಿರಾಸಕ್ತಿ ಹೊಂದಿರುವ ಕುರಿತು ರಾಜೀವ್‌ ಕುಮಾರ್‌ ಅವರು ಕಳವಳ ವ್ಯಕ್ತಪಡಿಸಿದರು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿಯೂ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗವು ಕಾರ್ಯಪ್ರವೃತ್ತವಾಗಿದೆ ಎಂದು ಇದೇ ವೇಳೆ ಹೇಳಿದರು.

ಒಟ್ಟು ಕ್ಷೇತ್ರಗಳು: 288

ಎಸ್‌ಸಿ ಮೀಸಲು: 29

ಎಸ್‌ಟಿ ಮೀಸಲು: 25

ಒಟ್ಟು ಮತದಾರರು: 9.59 ಕೋಟಿ

ಪುರುಷ ಮತದಾರರು: 4.95 ಕೋಟಿ

ಮಹಿಳಾ ಮತದಾರರು: 4.64 ಕೋಟಿ

ತೃತೀಯ ಲಿಂಗಿಗಳು: 5997


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ