Breaking News

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ

Spread the love

ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್‌ಗೆ ಬಿಜೆಪಿ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದರು.

 

‘ರಾಜ್ಯ ಸರ್ಕಾರ ತಾನಾಗಿಯೇ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ಮಾಡುವುದಿಲ್ಲ. ಸರ್ಕಾರ ಬೀಳಿಸಲು ಕೆಲವರ ಬಳಿ ಹಣ ಇರಬಹುದು. ಏಕೆಂದರೆ ಅವರ ಬಳಿ ಭ್ರಷ್ಟಾಚಾರ ಮಾಡಿದ ಸಾಕಷ್ಟು ಸಂಪತ್ತು ಇದೆ. ಆದರೆ, ಇದಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡುವುದಿಲ್ಲ’ ಎಂದು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರು ಉಲ್ಲೇಖಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಣ ಮೀಸಲು ಇಟ್ಟುಕೊಂಡವರು ಯಾರೂ ಎಂಬುದನ್ನು ನೀವೇ (ಪತ್ರಕರ್ತರು) ಅಂದಾಜು ಮಾಡಬೇಕು. ಅವರ ಹೆಸರನ್ನು ನಾನು ಹೇಳುವುದಿಲ್ಲ. ಈ ಹಿಂದೆ ಅವರ ಮನೆಯಲ್ಲಿ ನೋಟು ಎಣಿಕೆ ಯಂತ್ರ ಪತ್ತೆಯಾಗಿತ್ತು. ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ನಡೆಯುವುದಾಗಿ ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ವಿಸರ್ಜನೆಯಾಗುವ ವರೆಗೆ ನಾವು ಕಾಯುತ್ತೇವೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.


Spread the love

About Laxminews 24x7

Check Also

ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

Spread the loveಗೋಕಾಕ : ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ